Monday, May 9, 2016

ನಿನ್ನಿಂದಲೇ ನಿನ್ನಿಂದಲೇ ಕನಸೊಂದು ಶುರುವಾಗಿದೆ ಮಿಲನ ಚಿತ್ರದ ಗೀತೆ.

ನಿನ್ನಿಂದಲೇ ನಿನ್ನಿಂದಲೇ ಕನಸೊಂದು ಶುರುವಾಗಿದೆ
ನಿನ್ನಿಂದಲೇ ನಿನ್ನಿಂದಲೇ ಮನಸ್ಸಿಂದು ಕುಣಿದಾಡಿದೆ

ಈ ಎದೆಯಲ್ಲಿ ಸಿಹಿಯಾದ ಕೋಲಾಹಲ
ನನ್ನ ಎದುರಲ್ಲೇ ನೀ ಹೀಗೆ ಬಂದಾಗಲೇ
ನಿನ್ನ ತುಟಿಯಲ್ಲಿ ನಗುವಾಗುವ ಹಂಬಲ
ನಾ ನಿಂತಲ್ಲೇ ಹಾಡದೆ ನಿನ್ನಿಂದಲೇ

ನಿನ್ನಿಂದಲೇ ನಿನ್ನಿಂದಲೇ ಕನಸೊಂದು ಶುರುವಾಗಿದೆ
ನಿನ್ನಿಂದಲೇ ನಿನ್ನಿಂದಲೇ ಮನಸ್ಸಿಂದು ಕುಣಿದಾಡಿದೆ

ಇರುಳಲ್ಲಿ ಜ್ವರದಂತೆ ಕಾಡಿ ಈಗ
ಹಾಯಾಗಿ ನಿಂತಿರುವೆ ಸರಿಯೇನು
ಬೇಕಂತಲೇ ಮಾಡಿ ಏನೋ ಮೋಡಿ
ಇನ್ನೆಲ್ಲೋ ನೋಡುವ ಪರಿಯೇನು
ಈ ಮಾಯೆಗೆ ಈ ಮರುಳಿಗೆ
ನಿನ್ನಿಂದ ಕಳೆ ಬಂದಿದೆ

ನಿನ್ನಿಂದಲೇ ನಿನ್ನಿಂದಲೇ ಕನಸೊಂದು ಶುರುವಾಗಿದೆ
ನಿನ್ನಿಂದಲೇ ನಿನ್ನಿಂದಲೇ ಮನಸ್ಸಿಂದು ಕುಣಿದಾಡಿದೆ

  ಹೋದಲ್ಲಿ ಬಂದಲ್ಲಿ ಎಲ್ಲ್ಲ ನಿನ್ನ
 ಸೊಂಪಾದ ಚೆಲುವಿನ ಗುಣ ಗಾನ
ಕೇದಿಗೆ ಗರಿಯಂತ ನಿನ್ನ ನೋಟ
ನನಗೇನೋ ಅಂದಂತೆ ಅನುಮಾನ

ನಿನ್ನಿಂದಲೇ ನಿನ್ನಿಂದಲೇ ಕನಸೊಂದು ಶುರುವಾಗಿದೆ
ನಿನ್ನಿಂದಲೇ ನಿನ್ನಿಂದಲೇ ಮನಸ್ಸಿಂದು ಕುಣಿದಾಡಿದೆ

No comments:

Post a Comment